Skip to main content

ದಮ್ಮಾಮ್ ನಿಂದ ಮಂಗಳೂರಿಗೆ ಬಂದಿಳಿದ ಚಾರ್ಟಡ್ ವಿಮಾನದ ಪ್ರಯಾಣಿಕರಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯ ವತಿಯಿಂದ ಮಂಗಳೂರಿನಲ್ಲಿ ಭವ್ಯ ಸ್ವಾಗತ


ಮಂಗಳೂರು ಸೆಪ್ಟೆಂಬರ್ 13: ದಾದ ಬಾಯ್ ಟ್ರಾವೆಲ್ಸ್ ಇವರ ಪ್ರಾಯೋಜಕತ್ವದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ಸಹಕಾರದಲ್ಲಿ ದಮ್ಮಾಮ್ ನಿಂದ ಮಂಗಳೂರಿಗೆ 170 ಪ್ರಯಾಣಿಕರನ್ನು ಹೊತ್ತ ವಿಶೇಷ ವಿಮಾನವು ಹವಾಮಾನದ ವೈಪರೀತ್ಯದಿಂದ ತಡವಾಗಿ ಬೆಂಗಳೂರು ವಿಮಾನದಲ್ಲಿ ಬಂದಿಳಿಯಿತು..ನಂತರ ಬೆಂಗಳೂರಿನಿಂದ ಮರು ಪ್ರಯಾಣ ಆರಂಭಿಸಿ ಮಂಗಳೂರಿಗೆ ರಾತ್ರಿ 11:15 ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು...









ಬಿರುಸಿನ ಮಳೆ ಮತ್ತು ತಾಂತ್ರಿಕ ಅಡಚಣೆಯಿಂದಾಗಿ 5ಗಂಟೆ ತಡವಾದ್ದರಿಂದ ಎಲ್ಲಾ ಪ್ರಯಾಣಿಕರು ಆಯಾಸ ಮತ್ತು ಹಸಿವಿನಲ್ಲಿರುವುದನ್ನು ಮನಗೊಂಡು ಮದ್ಯ ರಾತ್ರಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಸಂಸ್ಥೆಯು ದಾದ ಬಾಯ್ ಸಹಕಾರದಲ್ಲಿ ಎಲ್ಲಾ ಪ್ರಯಾಣಿಕರಿಗೆ ಆಹಾರದ ವ್ಯವಸ್ಥೆ ಹಾಗೂ ದೂರದ ಊರಿಗೆ ತೆರಳಲು ವಾಹನದ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ನಡು ರಾತ್ರಿಯಲ್ಲಿ ಎಲ್ಲಾ ರೀತಿಯ ಸಹಕಾರವನ್ನು ನೀಡಿತ್ತು..









ವಿಶೇಷ ವಿಮಾನದಲ್ಲಿ ನೌಕರಿ ಕಳೆದುಕೊಂಡಿರುವ ಕಾರ್ಮಿಕರು, ವೀಸಾ ಅವಧಿ ಮುಗಿದು ತ್ರಿಶಂಕು ಸ್ಥಿತಿಯಲ್ಲಿದ್ದವರು, ಮಧುಮೇಹ, ಹೃದ್ರೋಗ ಮತ್ತಿತರ ಕಾಯಿಲೆಯಿಂದ ಬಳಲುತ್ತಿದ್ದವರು, ಹಿರಿಯ ನಾಗರಿಕರು, ಗರ್ಭಿಣಿ, ಮಕ್ಕಳು ಸೇರಿದಂತೆ ಎಲ್ಲಾ ಪ್ರಯಾಣಿಕರು ತಾಯ್ನಾಡಿಗೆ ಸುರಕ್ಷಿತವಾಗಿ ತಲುಪಿದರು.ಇಂತಹ  ಯೋಜನೆಯನ್ನು ಕೈಗೊಂಡ ದಾದ ಬಾಯ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಕಾರ್ಯಗಳಿಗೆ ಪ್ರಯಾಣಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಯಿತು









ದಮ್ಮಾಮ್ ವಿಮಾನ ನಿಲ್ದಾಣದಿಂದ BDM ಕಾರ್ಯನಿರ್ವಾಹಕರಾದ ಫರ್ಝಾನ್ ಸಿದ್ದಕಟ್ಟೆ,ಮುಝಮ್ಮಿಲ್, ಫಯಾಝ್, ನೌಫಲ್ ಬಜ್ಪೆ ಹಾಗೂ ಇಂಡಿಯನ್ ಸೋಷಿಯಲ್ ಫೋರಮ್ ನಾಯಕರಾದ ಅತಾವುಲ್ಲಾ, ಶರೀಫ್ ಜೊಕ್ಕಟ್ಟೆ ,ಶಬೀರ್ ಕೃಷ್ಣಾಪುರ, ಇಬ್ರಾಹಿಂ ವೇಣೂರು ಸಕಲ ವ್ಯವಸ್ಥೆ ಸಿದ್ದಪಡಿಸಿ ಪ್ರಯಾಣಿಕರನ್ನು ಬೀಳ್ಕೊಟ್ಟು ಶುಭ ಹಾರೈಸಿದರು..









ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರನ್ನು ಸ್ವಾಗತಿಸಲು ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಅಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ, ಕಾರ್ಯದರ್ಶಿ ನವಾಝ್ ಕಲ್ಲರಕೋಡಿ,ಅಡ್ಮಿನ್ ಗಳಾದ ದಾವೂದ್ ಬಜಾಲ್,ರಝ್ಝಾಾಕ್ ಸಾಲ್ಮರ,ಆರಿಫ್ ಮೊಂಟೆಪದವು,ಫಾರೂಕ್ ರೋಮಾಂಟಿಕ್ ಬಿಡಿಎಂ 24×7 ಸದಸ್ಯರಾದ ಮನ್ಸೂರ್ ಕೋಡಿಜಾಲ್, ರಫೀಕ್ ಬಜ್ಪೆ, ರಿಝ್ವಾನ್ ಬಜ್ಪೆ,ನಿಝಾಾಮ್ ಮಂಜನಾಡಿ ಮೊದಲಾದವರು ಉಪಸ್ಥಿತರಿದ್ದರು.

























ಮಾಧ್ಯಮ ವಿಭಾಗ:ಬ್ಲಡ್ ಡೋನರ್ಸ್ ಮಂಗಳೂರು(ರಿ)


Comments

Popular posts from this blog

ಸಹೋದರತೆ ಸಾರುವ ಈದ್ ಉಲ್ ಫಿತರ್ ಹಬ್ಬಕ್ಕೆ ಶುಭ ಸಂದೇಶ ಸಾರಿದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆ

ಸಹೋದರತೆಯ ಸಂದೇಶ ಬಿತ್ತುವ ಈದ್-ಉಲ್-ಫಿತರ್ ಹಬ್ಬವು ಜಗತ್ತಿನ ಮುಸ್ಲಿಮರು ಒಂದು ತಿಂಗಳು ಕಠಿಣ ಉಪವಾಸ ವೃತ ಆಚರಿಸಿದ ನಂತರ ಶವ್ವಾಲ್ ತಿಂಗಳ ಚಂದ್ರ ದರ್ಶನದೊಂದಿಗೆ ಈದ್-ಉಲ್-ಫಿತರ್ ಆಚರಿಸುತ್ತಾರೆ. ಪರಸ್ಪರ ಸಂತೋಷ ಹಂಚಿಕೊಳ್ಳಲು ಹಬ್ಬಗಳು ಪೂರಕ. ಜನರನ್ನು ಬೆಸೆಯುವ ಬಂದವಾಗಿ, ಪ್ರೀತಿಯ ಪ್ರತೀಕವಾಗಿ ಸೌಹಾರ್ದತೆ, ಸೋದರತೆಯ ಭರವಸೆ ಇಮ್ಮಡಿಗೊಳಿಸೂದರ ಜೊತೆಗೆ ಕಷ್ಟ, ಸುಖ, ದುಃಖ, ದುಮ್ಮಾನಕ್ಕೆ ಆತ್ಮವಿಶ್ವಾಸ ಮೂಡಿಸುತ್ತದೆ. ಎಲ್ಲರನ್ನೂ ಒಂದು ಗೂಡಿಸುವ ಹಬ್ಬಗಳಿಗೆ ತನ್ನದೇ ಹಿನ್ನಲೆ ಇರುತ್ತದೆ. ಜಗತ್ತಿನ ಮುಸ್ಲಿಮರು ಈದ್-ಉಲ್-ಫಿತರ್ ಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು ಜಗತ್ತಿನಲ್ಲಿ ಕೋವಿಡ್-19 ಎಂಬ ಮಾರಕ ರೋಗದ ಆಘಾತದಿಂದಾಗಿ ಜಗತ್ತಿನ ಎಲ್ಲರೂ ನೋವಿನಲ್ಲಿರುವ ಸಂಧರ್ಭದಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಬೇಕಾಗಿದೆ ಎಂಬ ಸಂದೇಶವನ್ನು ಧಾರ್ಮಿಕ ನಾಯಕರು ರವಾನಿಸಿದ್ದಾರೆ.  ಫಿತ್ರ್ ಝಕಾತ್ ಎಂಬ ದಾನ ವಿತರಿಸುವುದು ಕಡ್ಡಾಯ ಮತ್ತು ಈ ಹಬ್ಬದ ವೈಶಿಷ್ಟ್ಯ. ಬಡವರಿಗೆ, ಹಸಿವಿನವರಿಗೆ ಹಸಿವು ನೀಗಿಸುವ ಸಂಕೇತವೂ ಇದರಲ್ಲಿ ಅಡಗಿದೆ. ಬದುಕಿರುವ ಜೀವಿಗಳ ಪ್ರತಿ ಒಬ್ಬ ವ್ಯಕ್ತಿಗೆ ನಿರ್ದಿಷ್ಟ ಪ್ರಮಾಣದ ಫಿತ್ರ್ ಝಕಾತ್ ಕಡ್ಡಾಯ ವಾಗಿದ್ದು ಇದನ್ನು ಕಡುಬಡವರಿಗೆ ಈದ್-ಉಲ್-ಫಿತರ್ ನಮಾಝಿಗೆ ಹೋಗುವ ಮೊದಲು ದಾನ ಮಾಡಬೇಕಾಗಿದೆ. ಈದ್ ದಿನದಂದು ಬೆಳಿಗ್ಗೆ ಈದ್ ನಮಾಜ್ ಮಾಡಿದ ನಂತರ ಸಹೋದರರು,ಕುಟುಂಬಸ್ಥರು,ಹಾಗೂ ನೆರೆಕರೆ ಮನೆಗೆ ಭೇಟಿ ...

ತುರ್ತು ರಕ್ತದಾನ ಮಾಡಿ ಜೀವದಾನಿಗಳಾದ ಬ್ಲಡ್ ಡೋನರ್ಸ್ ಮಂಗಳೂರು (ರಿ) ಕಾರ್ಯನಿರ್ವಾಹಕರು …!

ಸೆಪ್ಟೆಂಬರ್ 03 :-ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾಗಿರುವ ಚೌಡೇಶ್  ದಾವಣಗೆರೆ ಎಂಬವರಿಗೆ ತುರ್ತಾಗಿ 2 ಯುನಿಟ್ ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಕಾರ್ಯನಿರ್ವಾಹಕರಾದ  ಸಾಮಾಜಿಕ ಕಾರ್ಯಕರ್ತ * ಶಾಹುಲ್ ಹಮೀದ್ ಕಾಶಿಪಟ್ಣ ಹಾಗೂ ಜಮಾಲ್ ಕಲ್ಲಡ್ಕ * ಎಂಬವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಕೋವಿಡ್ ಸಂದಿಗ್ಧ ಪರಿಸ್ಥಿತಿಯ ವೇಳೆಯಲ್ಲೂ ಒಂದು ಜೀವದ ಉಳಿವಿಗಾಗಿ ಸರ್ವ ಸುರಕ್ಷಾ ಮಾರ್ಗಸೂಚಿಗಳನ್ನು ಅನುಸರಿಸಿ ಮಾನವೀಯತೆ ಮೆರೆದ ತಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ  ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)

ಬೈಕ್ ರೈಡಿಂಗ್ ನ ಸಾಹಸಿಗರು ಜೀವದಾನದಲ್ಲಿ ಭಾಗಿಯಾಗುವುದರೊಂದಿಗೆ ರೋಗಿಯ ಕುಟುಂಬಕ್ಕೆ ಧೈರ್ಯ ತುಂಬಿದ ಸಹರಾ ಬೈಕ್ ರೈಡರ್ಸ್ ಸದಸ್ಯರು …!

ಆಗಸ್ಟ್ 31:- ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಯಾದ ಚೌದೇಶ್ ದಾವಣಗೆರೆ ಎಂಬವರಿಗೆ ತುರ್ತಾಗಿ 3 ಯುನಿಟ್ ರಕ್ತದ ಅವಶ್ಯಕತೆಯ ಸಂದರ್ಭದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ)ಇದರ ಕಾರ್ಯನಿರ್ವಾಹಕರ ಕರೆಗೆ ಸ್ಪಂದಿಸಿ ಸಹರಾ ಬೈಕ್ ರೈಡರ್ಸ್ ಇದರ ಸದಸ್ಯರುಗಳಾದ * ತಸ್ರೀಫ್ ಸಹರಾ ,ನೌಶಾದ್ ಸಹರಾ ಹಾಗೂ ಅನ್ಸಾರ್ ಸಹರಾ * ಎಂಬವರು ರಕ್ತದಾನ ಮಾಡಿ ರೋಗಿಯ ಪಾಲಿಗೆ ಆಶಾಕಿರಣರಾದರು. ಕೋವಿಡ್ ಸಂದಿದ್ಧ ಪರಿಸ್ಥಿತಿಯ ವೇಳೆಯಲ್ಲೂ ಒಂದು ಜೀವದ ಉಳಿವಿಗಾಗಿ ಸರ್ವ ಸುರಕ್ಷಾ ಮಾರ್ಗಸೂಚಿಗಳನ್ನು ಅನುಸರಿಸಿ ಮಾನವೀಯತೆ ಮೆರೆದ ತಮಗೆ ಹೃದಯಾಂತರಾಳದ ಕೃತಜ್ಞತೆಗಳು. ಕೊರೋನಾ ಬಗ್ಗೆ ಭಯ ಬೇಡ ...ಎಚ್ಚರ  ಇರಲಿ .. ಮಾಧ್ಯಮ ವಿಭಾಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)